ಮೂಡಿಗೆರೆ, ಸೆಪ್ಟೆಂಬರ್ 17: ಮೂಡಿಗೆರೆ ಅರಣ್ಯ ಇಲಾಖೆ ವ್ಯಾಪ್ತಿಯ ಕಡೆ ಮಡ್ಕಲ್ ಗ್ರಾಮದ ಸುತ್ತಮುತ್ತ ಕಳೆದ ಕೆಲವು ಸಮಯದಿಂದ ಒಂಟಿ ಕಾಡಾನೆಯೊಂದು ಸಂಚರಿಸುತ್ತಿರುವ ಹಿನ್ನೆಲೆಯಲ್ಲಿ, ಸುತ್ತಮುತ್ತಲಿನ ಗ್ರಾಮಸ್ಥರು ಹಾಗೂ ವಾಹನ ಸವಾರರು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಅರಣ್ಯ ಇಲಾಖೆ ಮನವಿ ಮಾಡಿದೆ.
ಕಡೆ ಮಡ್ಕಲ್, ಹಾಂದಿ, ಘಟ್ಟದಹಳ್ಳಿ, ಮಾಕೋನಹಳ್ಳಿ, ನಂದೀಪುರ, ಬಾರದಹಳ್ಳಿ ಹಾಗೂ ಹಳಸೆ ಗ್ರಾಮಗಳ ಸುತ್ತಮುತ್ತ ಕಾಡಾನೆ ಸಂಚಾರ ಇರುವ ಸಾಧ್ಯತೆ ಇರುವುದರಿಂದ, ಸಾರ್ವಜನಿಕರು ಎಚ್ಚರಿಕೆಯಿಂದ ಸಂಚರಿಸುವಂತೆ ಇಲಾಖೆ ಸೂಚಿಸಿದೆ.
ವಿಶೇಷವಾಗಿ ಕಾಡಾನೆ ಕಂಡುಬಂದ ಸಂದರ್ಭದಲ್ಲಿ ಅದರ ಸಮೀಪಕ್ಕೆ ತೆರಳದೆ, ತಕ್ಷಣವೇ ಅರಣ್ಯ ಇಲಾಖೆಯ ಆನೆ ಕಾರ್ಯಪಡೆ ನಿಯಂತ್ರಣ ಕೊಠಡಿ – 7204004261 ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡುವಂತೆ ತಿಳಿಸಲಾಗಿದೆ.
ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಕಾಡಾನೆ ಸಂಚಾರದ ಸಂದರ್ಭದಲ್ಲಿ ವಾಹನ ಸವಾರರು ಹಾಗೂ ಗ್ರಾಮಸ್ಥರು ಅಗತ್ಯ ಮುನ್ನೆಚ್ಚರಿಕೆ ವಹಿಸಿ ಅರಣ್ಯ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಲಾಗಿದೆ.
ಪ್ರಕಟಣೆ: ಅರಣ್ಯ ಇಲಾಖೆ, ಮೂಡಿಗೆರೆ
ದಿನಾಂಕ: 17.09.2026 | ಸಮಯ: ಸಂಜೆ 7:19.
ಒಂಟಿ ಕಾಡಾನೆ ಸಂಚಾರ: ಎಚ್ಚರಿಕೆ ವಹಿಸಲು ಅರಣ್ಯ ಇಲಾಖೆ ಸೂಚನೆ
GNE UPDATES
ಇತ್ತೀಚಿನ ಸುದ್ದಿ