ಮೂಡಿಗೆರೆ, ಸೆ.17: ಮೂಡಿಗೆರೆ ತಾಲೂಕಿನ ಮಡ್ಕಲ್ ಗ್ರಾಮದಿಂದ ಒಂಟಿ ಕಾಡಾನೆಯೊಂದು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಂಚರಿಸುತ್ತಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ.
ಮಾಕೋನಹಳ್ಳಿ, ನಂದೀಪುರ, ಕಾರ್ ಬೈಲು, ಮೂಡಸಸಿ, ಹುಲಿಹಂಡ್ಲು ಎಸ್ಟೇಟ್, ಚೇತನಹಳ್ಳಿ ಹಾಗೂ ಕಲ್ಲುಗುಡ್ಡ ಗ್ರಾಮಗಳ ಸುತ್ತಮುತ್ತ ಕಾಡಾನೆ ಸಂಚಾರ ಕಂಡುಬಂದಿರುವುದರಿಂದ ಗ್ರಾಮಸ್ಥರು ಹಾಗೂ ವಾಹನ ಸವಾರರು ಅತ್ಯಂತ ಎಚ್ಚರಿಕೆಯಿಂದ ಸಂಚರಿಸುವಂತೆ ಅರಣ್ಯ ಇಲಾಖೆ ಮನವಿ ಮಾಡಿದೆ.
ಕಾಡಾನೆ ಕಾಣಿಸಿಕೊಂಡಲ್ಲಿ ಸಾರ್ವಜನಿಕರು ಅದರ ಸಮೀಪಕ್ಕೆ ತೆರಳದೆ, ತಕ್ಷಣವೇ ಆನೆ ಕಾರ್ಯಪಡೆ ನಿಯಂತ್ರಣ ಕೊಠಡಿ – 7204004261 ದೂರವಾಣಿ ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡುವಂತೆ ಇಲಾಖೆ ತಿಳಿಸಿದೆ.
ದಿನಾಂಕ: 17.09.2026 | ಸಮಯ: ರಾತ್ರಿ 8.00 ಗಂಟೆ.
ಒಂಟಿ ಕಾಡಾನೆ ಸಂಚಾರ: ಗ್ರಾಮಸ್ಥರಿಗೆ ಅರಣ್ಯ ಇಲಾಖೆ ಎಚ್ಚರಿಕೆ!
GNE UPDATES
ಇತ್ತೀಚಿನ ಸುದ್ದಿ